ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು !
ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ದಿನವೇ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪರಶುರಾಮ್ ಬಾಬು (16) ಮೃತ ದುರ್ದೈವಿ ಆಗಿದ್ದಾನೆ.
ಮನೆ ಹಿಂಭಾಗದ ಹಿತ್ತಲಿನ ಕಂಬಕ್ಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.ಆನಂದಪುರದ ಕೆಪಿಎಸ್ ಸಿ ಶಾಲೆಯಲ್ಲಿ ಬಾಬು ವ್ಯಾಸಂಗ ಮಾಡುತ್ತಿದ್ದನು.ಪರೀಕ್ಷಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಸಹ ವ್ಯಕ್ತವಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply