ಭದ್ರಾವತಿಯಲ್ಲಿ ಚಿರತೆ ಪ್ರತ್ಯಕ್ಷ ! ಕೊಟ್ಟಿಗೆಯಲ್ಲಿದ್ದ ಕುರಿಗಳನ್ನು ಬೇಟೆಯಾಡಿದ ಚಿರತೆ !
ಭದ್ರಾವತಿ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಚಿರತೆಗಳ ಹಾವಳಿ ಮುಂದುವರೆದಿದೆ. ಕೆಲ ತಿಂಗಳುಗಳ ಹಿಂದಷ್ಟೇ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಮಹಿಳೆಯೊಬ್ಬರು ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಇದೀಗ ಭದ್ರಾವತಿಯ ಗ್ರಾಮ ಒಂದರಲ್ಲಿ ಚಿರತೆ ಕಾಣಿಸಿಕೊಂಡಿದೆ.
ಭದ್ರಾವತಿ ತಾಲೂಕಿನ ರತ್ನಾಪುರ ಗ್ರಾಮ ಎಂಬಲ್ಲಿ ಕೊಟ್ಟಿಗೆಯಲ್ಲಿದ್ದ ಎರಡು ಕುರಿಗಳನ್ನು ತಿಂದಿರುವ ಘಟನೆ ನಡೆದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ರತ್ನಾಪುರ ಗ್ರಾಮದಲ್ಲಿ ನಂದಪ್ಪ ಎಂಬುವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎರಡು ಕುರಿಮರಿಗಳನ್ನು ಹೊತ್ತಯ್ದು ಕಬ್ಬಿನ ಗದ್ದೆಯಲ್ಲಿ ತಿಂದು ಹಾಕಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply