BREAKING NEWS : ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ದಾಳಿ !
ಶಿವಮೊಗ್ಗ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ ಸೊಪ್ಪುಗಡ್ಡೆ, ಇಂದಿರಾನಗರ, ಬೆಟ್ಟ ಮಕ್ಕಿ ಸೇರಿದಂತೆ ಐದಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಎನ್ ಐ ಎ ಅಧಿಕಾರಿಗಳು ರಾಮೇಶ್ವರಂ ಕೆಫೆ, ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ 15 ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಕೆಲ ಶಂಕಿತರ ಮನೆ ಮೇಲೆ ದಾಳಿ ನಡೆಸಿರುವ ಎನ್ ಐ ಎ ಅಧಿಕಾರಿಗಳು. ಮಾಹಿತಿ ಕಲೆ ಹಾಕುತ್ತಿದ್ದು. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply