BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !
ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ದಾಳಿ ನಡೆಸಿದ ಬೆನ್ನಲ್ಲೇ , ಇದೀಗ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗದ ಗಾಂಧಿ ಬಜಾರ್ ನ ಕರಿದೇವರ ಕೇರಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ.
ಐದರಿಂದ ಎಂಟು ಅಧಿಕಾರಿಗಳ ತಂಡ ರಂಗನಾಥ ನಿಲಯದ ಐದನೇ ಅಂತಸ್ಥಿನ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ.ಇದು ಬಿಬಿಎಂಪಿ ಇಂಜಿನಿಯರ್ ಒಬ್ಬರ ಕಟ್ಟಡವಾಗಿದ್ದು ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply