ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ! ಕಾರಣವೇನು ?
ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.
ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಕೆ ಎಸ್ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. 10 ಬೈಕ್, ಒಂದು ಜೀಪ್ಗೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ರ್ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್ಗಳು, 4 ಕಾರು ಭಾಗಿ ಹಿನ್ನೆಲೆ ಚುನಾವಣಾಧಿಕಾರಿ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಬೈಕ್ಗಳ ಮೇಲೆ ಓಂ ಬಾವುಟ ಕಟ್ಟಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.
ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಗಿಡ್ಡಪ್ಪ ದೇವರ ದೇವಸ್ಥಾನದ ವರೆಗೆ ಹೊರಟ ಬೈಕ್ ರ್ಯಾಲಿಯಲ್ಲಿ ಬಳಸಿರುವ ಬೈಕ್ ಗಳು ಮತ್ತು ಬೈಕ್ ಗಳ ಮೇಲೆ ಓಂ ಚಿಹ್ನೆ ಬಳಸಿರುವುದು ಚುನಾವಣೆ ನೀತಿ ಸಂಹಿತ ಉಲ್ಲಂಘನೆಯಾಗಿದೆ ಎಂದು ದೂರು ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply