ಶಿವಮೊಗ್ಗದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ !
ಶಿವಮೊಗ್ಗ : ನಗರದಲ್ಲಿ ಎಂ ಬಿ ಬಿ ಎಸ್ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ..
ನಗರದ ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸಿಮ್ಸ್ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತಿದದ್ದು, ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ, ಚಿಕಿತ್ಸೆ ಪಲಕಾರಿಯಾಗದೆ ನೆನ್ನೆ ಅಂದರೆ ಶುಕ್ರವಾರ ರಾತ್ರಿ ಕೊನಯುಸಿರು ಎಳೆದಿದ್ದಾನೆ.
ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಯುವಕ ಶಿವಮೊಗ್ಗದ ಸಿಮ್ಸ್ ಹಾಸ್ಟೆಲ್ ನಲ್ಲಿಯೇ ಉಳಿದುಕೊಂಡಿದ್ದನು ಎಂದು ಹೇಳಲಾಗಿದೆ. ಇನ್ನೂ ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply