ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ  ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..?

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ರವರಿಗೆ ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ ಪರಿಣಾಮವಾಗಿ. ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವೆದ್ದು ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ, ಈ ಸಂಬಂಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಈ ಸಮಯದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರಿಗೆ ಹೈಕಮಾಂಡ್ ನಿಂದ ಕರೆ ಬಂದಿದ್ದು. ದೆಹಲಿಗೆ ಬರುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಇಂದು ರಾಜ್ಯಕ್ಕೆ ಆಗಮಿಸಿದ್ದು, ಅಮಿತ್ ಶಾ, ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಸರಿ ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ಸಮಯದಲ್ಲಿ ನಾಳೆ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ.

ಈ ಸಂಬಂಧ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅಮಿತ್ ಶಾ ರವರನ್ನು ಉಕ್ಕಿನ ಮನುಷ್ಯ ಎಂದು ಉಲ್ಲೇಖಿಸಿ ಮಾತನಾಡಿದ ಇವರು ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಲ್ ಮಾಡಿದ್ರು, ರಾಜ್ಯ ಬಿಜೆಪಿ ಪಕ್ಷ ಒಂದು ಕುಟುಂಬದವರ ಕೈಯಲ್ಲಿದೆ ಅಪ್ಪ ಮಕ್ಕಳ ಕೈಯಲ್ಲಿರುವ ಪಕ್ಷವನ್ನ ಶುದ್ಧೀಕರಣ ಮಾಡಬೇಕಿದೆ ಹಿಂದುತ್ವದ ಪರವಾಗಿ ಸ್ಪರ್ಧೆ ಮಾಡುತ್ತಿದ್ದೇನೆ.ಪ್ರತಾಪ್ ಸಿಂಹ, ಸಿಟಿ ರವಿ ಸದಾನಂದಗೌಡ ಪರವಾಗಿ ಕೆಲಸ ಮಾಡಿರುವೆ. ಈ ಚುನಾವಣೆಯಲ್ಲಿ ಹಿಂದುಳಿದವರಿಗೆ ಟಿಕೆಟ್ ನೀಡಿಲ್ಲ. ಹಾಗಾಗಿ ಸ್ಪರ್ಧಿಸುತ್ತಿರುವುದಾಗಿ ಅಮಿತ್ ಶಾ‌ಗೆ ಹೇಳಿರುವೆ ಎಂದರು.

 ಇನ್ನು ಅಮಿತ್ ಶಾ ಸ್ಪರ್ಧೆ ಬೇಡ ಎಂದಿದ್ದಾರೆ, ಆದರೆ ನಾನು ನನ್ನ ಸ್ಪರ್ಧೆಯಿಂದಾಗಿ ಪಕ್ಷದ ಸುದ್ದಿಕರಣವಾಗುತ್ತದೆ ಮಾಡುತ್ತೇನೆ ಎಂದು ಹೇಳಿದ್ದೇನೆ. ದೊಡ್ಡವರ ಮಾತನ್ನು ಮೀರಲ್ಲ ದೆಹಲಿಗೆ ಬಂದಮೇಲೆ ಸ್ಪರ್ಧೆ ಬೇಡ ಎನ್ನುವ ಹಾಗಿಲ್ಲ, ಸೂಚನೆ ಇಲ್ಲ ಪ್ರಾರ್ಥನೆ ಮಾಡುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಇಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಅಖಾಡದಿಂದ ಹಿಂದೆ ಸರಿತಾರಾ ಮಾಜಿ ಸಚಿವ ಕೆ ಎಸ್ ಈ ?

ಇನ್ನು ಮುಂದುವರೆದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಮಾತನಾಡಿದ್ದಾರೆ. ಹೈಕಮಾಂಡ್ ಏನಾದರೂ ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ಶಿವಮೊಗ್ಗ ಲೋಕಸಭಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಕಾದು ನೋಡಬೇಕಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.