ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ !  ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ  ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ ! 

ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಬಿಜೆಪಿ ಬಂಡಾಯ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ. ಭೇಟಿಗೆ ಗೃಹ ಸಚಿವರು ಸಿಗದೇ ಹೋದದ್ದು, ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಅಮಿತ್ ಶಾ ರವರನ್ನ ಭೇಟಿಯಾಗಲು ಸಾಧ್ಯವಾಗಿಲ್ಲ. ನಂತರ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆ ಎಸ್ ಈಶ್ವರಪ್ಪ ಗೃಹ ಸಚಿವರು ನನಗೆ ದೂರವಾಣಿ ಕರೆ ಮಾಡಿ ಬುಧವಾರ ದಿಲ್ಲಿಗೆ ಬನ್ನಿ ಎಂದಿದ್ದರು. ಅದಕ್ಕಾಗಿ ಬಂದೆ. ಆದರೆ, ಇಲ್ಲಿಗೆ ಬಂದ ಬಳಿಕ ಅಮಿತ್‌ ಶಾ ಅವರ ಕಚೇರಿಯಿಂದ ಫೋನ್‌ ಬಂತು. ಅಮಿತ್‌ ಶಾ ಅವರು ಸದ್ಯಕ್ಕೆ ಸಿಗುವುದಿಲ್ಲ ಎಂಬ ಸಂದೇಶ ಬಂದಿದೆ. ಇದರ ಅರ್ಥ ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದಾಗಿದೆ. ಬಿ.ವೈ.ರಾಘವೇಂದ್ರ ಸೋಲಬೇಕು ಎಂಬುದು ಇದರ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಜಾಹಿರಾತು  :

ಅಮಿತ್‌ ಶಾ ಅವರು ಸಿಗದೆ ಇರಲು ಕಾರಣವೂ ಇದೆ. ಅವರು ನನ್ನನ್ನು ಭೇಟಿಯಾಗಿದ್ದರೂ ನಾನು ಚುನಾವಣೆಯಲ್ಲಿ ನಿಲ್ಲುತ್ತಿದ್ದೆ. ಆದರೆ, ಇವತ್ತು ಅಮಿತ್‌ ಶಾ ಅವರು ಸಿಕ್ಕಿಲ್ಲ ಎನ್ನುವ ಅರ್ಥವೇ, ನಾನು ಚುನಾವಣೆಯಲ್ಲಿ ನಿಲ್ಲಬೇಕು ಎಂಬುದು, ರಾಘವೇಂದ್ರ ವಿರುದ್ಧ ಗೆಲ್ಲಬೇಕು ಎಂಬುದಾಗಿದೆ. ಭೇಟಿಗೆ ಸಿಗದ ಕಾರಣ ನಾನು ವಾಪಸ್‌ ಹೋಗುತ್ತಿದ್ದೇನೆ. ಯಾರನ್ನೂ ಭೇಟಿಯಾಗುವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆಶೀರ್ವಾದದಿಂದ ಗೆಲ್ಲುತ್ತೇನೆ ಎಂದು ತಿಳಿಸಿದರು.

ಬಿಜೆಪಿಯ ನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬಂದಿದ್ದೇನೆ. ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಒಂದು ನೀತಿ, ನಮಗೆ ಒಂದು ನೀತಿಯೇ? ಅವರ ಮನೆಯಲ್ಲಿ ಒಬ್ಬ ಸಂಸದ, ಮತ್ತೊಬ್ಬ ಶಾಸಕ ಇದ್ದಾರೆ. ಶಾಸಕರಾದವರು ಬಿಜೆಪಿ ರಾಜ್ಯಾಧ್ಯಕ್ಷ ಬೇರೆ ಆಗಿದ್ದಾರೆ. ಎಲ್ಲರ ಸಹಕಾರದಲ್ಲಿ ನಾನು ಚುನಾವಣೆ ಗೆದ್ದು ಮೋದಿ ಅವರ ಕೈ ಬಲಪಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.