ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !
ಶಿವಮೊಗ್ಗ : ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಾಡ ಬಂದೂಕು ಸಮೇತ ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ
ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಬಂಧಿತ ಆರೋಪಿಗಳು.
ಇವರು ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ನಾಡಬಂದೂಕಿನಿಂದ ಜಿಂಕೆ ಬೇಟೆಯಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಜಿಂಕೆ ಚರ್ಮ, ಜಿಂಕೆ ತಲೆ, ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.
ವಲಯ ಅರಣ್ಯಾಧಿಕಾರಿ ಸಂಧ್ಯಾ, ಉಪ ವಲಯ ಅರಣ್ಯಾಧಿಕಾರಿ ಜಿ.ಕೆ. ಸುಧಾಕರ್, ಮೋಜಣಿದಾರ, ಸಿಬ್ಬಂದಿ ಮಹೇಶ್, ವಲನಪಾಲಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply