ನಿದಿಗೆ ಬಳಿ ಭೀಕರ ಅಪಘಾತ ! ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ! ಓರ್ವ ಸಾವು !
ಶಿವಮೊಗ್ಗ : ನಗರದ ಹೊರವಲಯ ನಿಧಿಗೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆ ನಿನ್ನೆ ಬೆಳಿಗ್ಗೆ 8 ಗಂಟೆಗೆ ನಡೆದಿದೆ ಎಂದು ವರದಿಯಾಗಿದೆ.
ಶಿವಮೊಗ್ಗದಿಂದ ಮಾಚೇನಹಳ್ಳಿಯ ಪ್ರತಿಷ್ಠಿತ ಕಾರ್ಖಾನೆಗೆ ಕೆಲಸಕ್ಕೆ ಹೋಗುತ್ತಿದ್ದ ಸಹಾಯಕ ಮ್ಯಾನೇಜರ್ ಅವರ ಕಾರು ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಇನ್ನೊಂದು ಕಾರಿನ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸಹಾಯಕ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೇಘರಾಜ್ ಮೃತಪಟ್ಟಿದ್ದಾರೆ.
ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ನಾಲ್ವರ ಪೈಕಿ ಒಬ್ಬ ಮಹಿಳೆಗೆ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಮೂವರನ್ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply