ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ! ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ! ಶಿವಣ್ಣ, ಮಧು ಬಂಗಾರಪ್ಪ ಸಾಥ್ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿವಂಗತ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ

ನಾಮಪತ್ರ ಸಲ್ಲಿಕೆಯ ಮೆರವಣಿಗೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದ್ದಾರೆ, ಇದರ ಜೊತೆಗೆ ಪತಿ ಶಿವರಾಜ್ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ರಾಮಣ್ಣ ಶ್ರೇಷ್ಟಿ ಪಾರ್ಕ್ ನಿಂದ ಆರಂಭವಾದ ಮೆರವಣಿಗೆ, ಗಾಂಧಿ ಬಜಾರ್ ಮುಖ್ಯ ರಸ್ತೆಯಿಂದ ಹೊರಟು, ಶಿವಪ್ಪ ನಾಯಕ ವೃತ್ತ, ಅಮೀರ್ ಅಹ್ಮದ್ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಹೊರಟು ನಾಮಪತ್ರ ಸಲ್ಲಿಸಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಗೀತಾ ಶಿವರಾಜಕುಮಾರ್ ಕೋಟೆ ಆಂಜನೇಯ ಸ್ವಾಮಿ, ಮಾರಿಕಾಂಬೆ ಹಾಗೂ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಗಣೇಶನ ಗುಡಿಯಲ್ಲಿ ಪೂಜೆ ಸಲ್ಲಿಸಿದರು.

ಇನ್ನು ಮೆರವಣಿಗೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧಡೆಯಿಂದ ಭಾರಿ ಸಂಖ್ಯೆಯಲ್ಲಿ ಬಂದಿರುವ ಸಹಸ್ರಾರು ಬೆಂಬಲಿಗರು, ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು, ಗೀತಾ ಶಿವರಾಜ್ ಕುಮಾರ್, ಡಿಸಿಎಂ ಡಿಕೆ ಶಿವಕುಮಾರ್, ನಟ ಶಿವರಾಜ್ ಕುಮಾರ್ ಪರ ಘೋಷಣೆ ಕೂಗುತ್ತಾ ಉರಿ ಬಿಸಿಲಿನಲ್ಲೂ ಮೆರವಣಿಗೆಯಲ್ಲಿ ಉತ್ಸಾಹದಿಂದ ಹೆಜ್ಜೆ ಹಾಕಿದ್ದಾರೆ,

ನಾಮಪತ್ರ ಸಲ್ಲಿಕೆಯ ಮೆರವಣಿಗೆಯ ವೇಳೆ ಭದ್ರಾವತಿ ಶಾಸಕ ಸಂಗಮೇಶ್, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಮಂಜುನಾಥ್ ಭಂಡಾರಿ, ಎಚ್ ಸಿ ಯೋಗೇಶ್, ಜಿ ಪಲ್ಲವಿ, ಶರತ್ ಮರಿಯಪ್ಪ, ಸೂಡ ಅಧ್ಯಕ್ಷ ಸುಂದರೇಶ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಆಯನೂರ್ ಮಂಜುನಾಥ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಎಂ ಶ್ರೀಕಾಂತ್,  ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.