ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪ ಎಂಬ ಹೆಸರಿನ ವ್ಯಕ್ತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರದ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಡಿ.ಎಸ್.ಈಶ್ವರಪ್ಪ ಅವರು ಮಂಗಳವಾರ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಇದೊಂದು ರಾಜಕೀಯ ತಂತ್ರಗಾರಿಕೆ ಎಂದು ಕ್ಷೇತ್ರದಲ್ಲಿ ಗುಸು, ಗುಸು ಕೇಳಿ ಬರುತ್ತಿದೆ. ಡಿಎಸ್ ಈಶ್ವರಪ್ಪ ಒಟ್ಟು 27 ಲಕ್ಷ ರೂಪಾಯಿ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಡಿಎಸ್ ಈಶ್ವರಪ್ಪ ಪತ್ನಿಯ ಹೆಸರಿನಲ್ಲಿ 10 ಎಕರೆ ಜಮೀನು ಹೊಂದಿದ್ದಾರೆ. ಹೆಸರಿನ ಆರಂಭದಲ್ಲಿ ಡಿಎಸ್ ಇರೋ ಕಾರಣ ಕೆಎಸ್ ಈಶ್ವರಪ್ಪ ಅವರಿಗೆ ತೊಂದರೆ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದೆ. ಡಿ.ಎಸ್.ಈಶ್ವರಪ್ಪ ಶಿಕಾರಿಪುರ ಪಟ್ಟಣದ ಮಾಯಪ್ಪನ ಕೇರಿಯವರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply