ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಹಿನ್ನಲೆ ಮೆರವಣಿಗೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ
ಬೆಂಗಳೂರಿನಿಂದ ಒಂದೇ ಹೆಲಿಕ್ಯಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ಸಾವಿರಾರು ಜನ ಕಾರ್ಯಕರ್ತರೊಂದಿಗೆ ನಗರದ ರಾಮಣ್ಣ ಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಗಿದ್ದು ಮೆರವಣಿಗೆಯಲ್ಲಿ, ತಂದೆ ಬಿ ಎಸ್ ಯಡಿಯೂರಪ್ಪ, ಮಾಜಿ ಸಿ ಎಂ ಕುಮಾರಸ್ವಾಮಿ, ಮಾಜಿ ಸಿ ಎಂ ಬಸವರಾಜ್ ಬೊಮ್ಮಯಿ, ಶಾಸಕ ಚನ್ನಬಸಪ್ಪ, ಸಿ ಟಿ ರವಿ, ಭೈರತಿ ಬಸವರಾಜ್, ಕುಮಾರ್ ಬಂಗಾರಪ್ಪ, ಮಾಳವಿಕ ಅವಿನಾಶ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ.
ಮೆರವಣಿಗೆಯಲ್ಲಿ ಸಾವಿರಾರು ಜನ ಕಾರ್ಯಕರ್ತರು ಜಮಾಯಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಘೋಷಣೆಗಳು ಮೊಳಗಿವೆ.ಕಸ್ತೂರ ಬಾ ಕಾಲೇಜಿನ ಬಳಿ ಬಹಿರಂಗ ಸಭೆ ನಡೆಯಲಿದೆ. ಅಲ್ಲಲ್ಲಿ ಜೆಸಿಬಿ ನಿಲ್ಲಿಸಿ ಹೂವಿನ ಹಾರ ಹಾಗೂ ಹಣ್ಣಿನ ಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply