ಶಿವಮೊಗ್ಗ : ತಾಲೂಕಿನ ಹರಮಘಟ್ಟ ಬಳಿ ಸಂಜೆ ಸುರಿದ ವಿಪರೀತ ಗುಡುಗು ಸಿಡಿಲು ಸಹಿತ ಭಾರಿ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತೋಟದಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದ್ದು. ರಾಕೇಶ್ ಎಂಬ ವ್ಯಕ್ತಿ ಮೃತವಾಗಿದ್ದಾರೆ.
ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ರಾಕೇಶ್ ( 28) ಮೃತ ದುರ್ದೈವಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ನಿನ್ನೆ ಅಷ್ಟೇ ಜಿಲ್ಲೆಯಲ್ಲಿ ಸುರಿದ ಮಳೆಗೆ ತೀರ್ಥಹಳ್ಳಿಯ ಕೋಣಂದೂರು ಬಳಿ ಮರ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ವ್ಯಕ್ತಿ ಒಬ್ಬ ಸಿಡಿಲಿಗೆ ಬಲಿಯಾಗಿದ್ದು ಜಿಲ್ಲೆಯಲ್ಲಿ ಮಳೆಗೆ ಎರಡನೇ ಬಲಿಯಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply