ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ವ್ಯಕ್ತಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಬಾಪೂಜಿ ನಗರದಲ್ಲಿ ನಡೆದಿದೆ
ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನದ ಬಳಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು ಬಾಪೂಜಿನಗರದ ಗಂಗಮ್ಮ ದೇವಸ್ಥಾನದ ಬಳಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ ಅಲಿಯಾಸ್ ಆರ್ ಎಕ್ಸ್ ಸೂರಿ ಎಂಬಾತನನ್ನು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಮೂಲಗಳ ಪ್ರಕಾರ ಸುರೇಶ ಅಲಿಯಾಸ್ ಆರ್ ಎಕ್ಸ್ ಸೂರಿ ಎಂಬಾತ ಇತ್ತೀಚೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದುಬಂದಿದ್ದು ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ನಡೆದ ಘಟನೆಗೆ ಕೌಟುಂಬಿಕ ಕಾರಣ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ತೆರಳಿ , ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply