ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ. ಶಿವಮೊಗ್ಗದ ಅಧಿಕೃತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ಪಕ್ಷೇತರವಾಗಿ ಸ್ಪರ್ಧಿಸಿವ ನಿರ್ಧಾರ ಮಾಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜು ಪಾಟೀಲ್ ಪಕ್ಷದಿಂದ ಉಚ್ಚಾಟನೆಯ ಆದೇಶವನ್ನು ಹೊರಡಿಸಿದ್ದಾರೆ
ಆದೇಶದಲ್ಲಿ ಏನಿದೆ ? ಎಷ್ಟು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ?
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply