ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೂವರು ಅಭ್ಯರ್ಥಿಗಳು ಲೋಕಸಭಾ ಕ್ಷೇತ್ರವನ್ನ ಗೆಲ್ಲಲು ತಮ್ಮ ತಮ್ಮ ಕಾರ್ಯತಂತ್ರವನ್ನು ಮುಂದುವರೆಸಿದ್ದಾರೆ.
ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರ ಪರ ಮತಯಾಚಿಸಲು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಅಂದರೆ ನಾಳೆ ಏಪ್ರಿಲ್ 24ರಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯ ಚುನಾವಣಾ ಸಹ ಪ್ರಭಾರಿ ಕೆ ಅಣ್ಣಮಲೈನಾಳೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬಿವೈ ರಾಘವೇಂದ್ರರ ಪರ ಮತ ಬೇಟೆಗಿಳಿಯಲಿರುವ ಅಣ್ಣಾಮಲೈ ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಂತರ ಸಂಜೆ 6: 30 ಕ್ಕೆ ಶಿವಮೊಗ್ಗ ಬಸ್ ನಿಲ್ದಾಣದ ಹಿಂಭಾಗ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಕೆ ಅಣ್ಣಾಮಲೈ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply