ಶಿವಮೊಗ್ಗ : ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಭದ್ರಾವತಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ಈ ವೇಳೆ ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಹಾಗೂ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಕೆ ಅಣ್ಣಮಲೈ ಅವರಿಗೆ ಹೂಗುಚ್ಚ ನೀಡಿ ಶಿವಮೊಗ್ಗಕ್ಕೆ ಸ್ವಾಗತಿಸಿದರು
ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆ ಶಿವಮೊಗ್ಗಕ್ಕೆ ಆಗಮಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಮಲೈ ಭದ್ರಾವತಿಯಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಪ್ರಚಾರ ನಡೆಸಲಿರುವ ಕೆ ಅಣ್ಣಮಲೈ ಶಿವಮೊಗ್ಗದಲ್ಲಿ ಮತ ಬೇಟೆಗೆ ಇಳಿದಿದ್ದಾರೆ
ಇನ್ನೂ ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬಂದ ಕೆ ಅಣ್ಣಮಲೈ ಅವರ ಹೆಲಿಕ್ಯಾಪ್ಟರ್ ಮತ್ತು ಕೆಲವು ಬ್ಯಾಗ್ ಗಳನ್ನು ಲೋಕಸಭಾ ಚುನಾವಣೆಯ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡ ತಪಾಸಣೆ ನಡೆಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply