ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಜೀಪ್ ! ವ್ಯಕ್ತಿ ಸ್ಥಳದಲ್ಲೇ ಸಾವು !

ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆಅರಸಾಳು ಸಮೀಪದಲ್ಲಿ ನಡೆದಿದೆ.

ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.