ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜಕುಮಾರ್ ಈಗಾಗಲೇ ಹಲವು ಕಡೆ ಪ್ರಚಾರ ನಡೆಸಿದ್ದು. ಚಿತ್ರರಂಗದ ಹಲವು ನಟ ನಟಿಯರು ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಫಿಲಂ ಛೇಂಬರ್ನವರು ಇದೇ ಮೊದಲ ಬಾರಿಗೆ ಗೀತಾಶಿವರಾಜ್ಕುಮಾರ್ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ ೮ ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್ಶೋ ಮೂಲಕ ಗೀತಕ್ಕನ ಪರ ವ್ಯಾಪಕ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು
ನಾವು ಅವರಿಗೆ ಒತ್ತಾಯಿಸಿಲ್ಲ. ಅವರೇ ಸ್ವಯಂ ಪ್ರೇರಿತರಾಗಿ ಬರುತ್ತಿದ್ದು, ಇನ್ನೂ ಅನೇಕ ಚಿತ್ರರಂಗದ ಪ್ರಮುಖರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನಟ ದುನಿಯಾ ವಿಜಿ, ಡಾಲಿ ಧನಂಜಯ , ಸತ್ಯ, ಚಿಕ್ಕಣ್ಣ, ವಿಜಯರಾಘವೇಂದ್ರ, ನೆನಪಿರಲಿ ಪ್ರೇಮ್, ನಿಸ್ವಿಕಾನಾಯ್ಡು, ಚಂದನಶೆಟ್ಟಿ, ಅನುಶ್ರೀ, ಅಕುಲ್ಬಾಲಾಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply