ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನ ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ.
ಲೋಕಸಭಾ ಕೇತ್ರದಿಂದ ಬಂಡಾಯ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರ ಜೊತೆ ಗುರುತಿಸಿಕೊಂಡು ಅಲ್ಲೇ ಚುನಾವಣಾ ಕಾರ್ಯ ಮಾಡುತ್ತಾ ಇರುವುದರಿಂದ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಆರು ವರ್ಷ ಪಕ್ಷದಿಂದ ಉಚ್ಛಾಟಿಸಬೇಕುʼ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಇ.ವಿಶ್ವಾಸ್, ಶಂಕರ್ ಗನ್ನಿ, ಎಸ್.ಜಿ.ರಾಜು, ಲಕ್ಷ್ಮಿ ಶಂಕರನಾಯ್ಕ, ಸುವರ್ಣ ಶಂಕರ್, ಆರತಿ ಆ.ಮ.ಪ್ರಕಾಶ್, ಲತಾ ಗಣೇಶ್, ಶಿವಮೊಗ್ಗ ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ.ಕಾಂತೇಶ್, ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಇವರನ್ನು ಉಚ್ಛಾಟನೆಗೆ ಶಿಫಾರಸು ಮಾಡಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply