ಶಿವಮೊಗ್ಗ ಸೆಂಟ್ರಲ್ ಜೈಲ್  : ಕೈದಿ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ !

ಶಿವಮೊಗ್ಗ : ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಮಾ.28ರಂದು ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಪರಶುರಾಮ್ ಅಲಿಯಾಸ್ ಚಿಂಗಾರಿ ಎನ್ನುವ ಕೈದಿಗೆ ಹೊಟ್ಟೆ ನೋವಿನ ಕಾರಣಕ್ಕೆ ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೊಟ್ಟೆ ನೋವು ಜಾಸ್ತಿ ಆದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರರಲಾಗಿತ್ತು. ಪರೀಕ್ಷೆ ಮಾಡಿದ ವೈದ್ಯರು ಪರಶುರಾಮ್ ಕಲ್ಲು ನುಂಗಿರಬಹುದು ಎಂದು ಶಂಕಿಸಿದರು

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ನಂತರ ಏ 1 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದ ವೈದ್ಯಾಧಿಕಾರಿಯ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಕಳಿಸಲಾಯಿತು

ಏ .3 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ವೈದ್ಯಾಧಿಕಾರಿಯಿಂದದ ಚಿಕಿತ್ಸೆ ಕೊಡಿಸಿ ಅವರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.ಅಲ್ಲಿ ಏಪ್ರಿಲ್ 25 ರಂದು ಶಸ್ತ್ರ ಚಿಕಿತ್ಸೆ ನಡೆಸಿ ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರ ತೆಗೆಯಲಾಗಿದೆ.

ಜೈಲಿನಲ್ಲಿ ನಿಷೇಧಿತ ವಸ್ತು ಮೊಬೈಲ್ ಫೋನ್ ಕೈದಿಯ ಹೊಟ್ಟೆಯಲ್ಲಿ ದೊರೆತಿರುವುದರಿಂದ ಆತನ ವಿರುದ್ಧ ಶಿವಮೊಗ್ಗ ಕಾರಾಗೃಹದ ಅಧೀಕ್ಷಕರು ಇಲ್ಲಿನ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.