ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಮೇಲೆ ಗರಂ ಆಗಿದ್ದರು. ಸರಿಯಾಗಿ ಟ್ರಾನ್ ಲೇಟ್ ಮಾಡಲು ಭಾರದೆ ಮಧು ಬಂಗಾರಪ್ಪ ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದಿಯಲ್ಲಿ ಭಾಷಣ ಮಾಡುತ್ತಿದ್ದ ಕಾರಣ, ಸ್ಥಳೀಯ ಜನರಿಗೆ ಅರ್ಥವಾಗಲೆಂದು ಶಿಕ್ಷಣ ಮತ್ತು ಸಾಕ್ಷರತ ಸಚಿವ ಮಧು ಬಂಗಾರಪ್ಪ ರಾಹುಲ್ ಗಾಂಧಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರ ಮಾಡಿ ಕನ್ನಡದಲ್ಲಿ ಹೇಳುತ್ತಿದ್ದರು. ಸರಿಯಾಗಿ ಭಾಷಾಂತರ ಮಾಡದೆ ಇದ್ದ ಕಾರಣ ರಾಹುಲ್ ಗಾಂಧಿ ವೇದಿಕೆಯ ಮೇಲೆ ಮಧು ಬಂಗಾರಪ್ಪನವರ ಮೇಲೆ ಚೂರು ಗರಂ ಆದರೂ. ನಂತರ ವೇದಿಕೆಯ ಮೇಲಿದ್ದ ಬೇರೆ ಒಬ್ಬ ವ್ಯಕ್ತಿ ರಾಹುಲ್ ಗಾಂಧಿಯ ಭಾಷಣವನ್ನು ಕನ್ನಡಕ್ಕೆ ಭಾಷಾಂತರ ಮಾಡಿ ಕನ್ನಡದಲ್ಲಿ ಹೇಳುತಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply