ಎರಡನೇ ಹಂತದ ಲೋಕಸಭೆ ಚುನಾವಣೆ  : ಬಹಿರಂಗ ಪ್ರಚಾರಕ್ಕೆ  ಇಂದು ತೆರೆ !

ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ.

ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್‌ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್‌ ಶೋಗಳ ಭರಾಟೆ ಇರಲಿದೆ. ಮತದಾನದ 48 ಗಂಟೆ ಮೊದಲು ಶೂನ್ಯ ಅವಧಿ ಪ್ರಾರಂಭವಾಗುವ ಕಾರಣ ಯಾವುದೇ ರೀತಿಯ ಅಬ್ಬರ ಪ್ರಚಾರ ಕೈಗೊಳ್ಳುವಂತಿಲ್ಲ. ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಆದರೆ, ಕಣದಲ್ಲಿರುವ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲು ಅವಕಾಶ ಇದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಪಡಿಸಿ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವಂತಿಲ್ಲ. ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ತೆರಳಿದ್ದಾರೆ. ಒಂದು ವೇಳೆ ಅಕ್ರಮವಾಗಿ ತಂಗುವ ಸಾಧ್ಯತೆ ಇರುವ ಕಾರಣ ಚುನಾವಣಾ ಸಿಬ್ಬಂದಿ ಕಲ್ಯಾಣ ಮಂಟಪ, ಹೋಟೆಲ್, ಅತಿಥಿಗೃಹ, ವಸತಿಗೃಹ ಸೇರಿದಂತೆ ಇತರೆ ಪ್ರದೇಶಗಳ ಪರಿಶೀಲನೆ ನಡೆಸಿದ್ದಾರೆ. ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಕ್ಷೇತ್ರ ಬಿಟ್ಟು ತೆರಳುವ ನಿರ್ಬಂಧ ಇರುವುದಿಲ್ಲ.

 ಕಣದಲ್ಲಿರುವ ಪ್ರಮುಖರು ಎರಡನೇ ಹಂತದಲ್ಲಿ ಶಿವಮೊಗ್ಗ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇಬ್ಬರು ಮಾಜಿ ಸಿಎಂಗಳು, ಇಬ್ಬರು ಹಾಲಿ ಕೇಂದ್ರ ಸಚಿವರು, ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸ್ಪರ್ಧೆಯಲ್ಲಿರುವುದರಿಂದ ಚುನಾವಣೆ ಪ್ರತಿಷ್ಠೆ ಪಡೆದುಕೊಂಡಿದೆ. ಹಾವೇರಿ ಮತ್ತು ಬೆಳಗಾವಿಯಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಧಾರವಾಡದಿಂದ, ಭಗವಂತ ಖೂಬಾ ಬೀದರ್‌ ಕ್ಷೇತ್ರದಿಂದ, ಶಿವಮೊಗ್ಗದಿಂದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ. 

ಇನ್ನುಳಿದಂತೆ ಬೆಳಗಾವಿಯಿಂದ ಮೃಣಾಲ್‌ ಹೆಬ್ಟಾಳ್ಕರ್‌, ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್‌, ಬೀದರ್‌ನಿಂದ ಸಾಗರ್‌ ಖಂಡ್ರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರೆ, ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಬಿಜೆಪಿಯಿಂದ ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ, ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡೆದ್ದಿದ್ದರೆ, ದಾವಣಗೆರೆಯಲ್ಲಿ ವಿನಯ್‌ ಕುಮಾರ್‌ ಕಾಂಗ್ರೆಸ್‌ ವಿರುದ್ಧ ಸೆಟೆದು ನಿಂತಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.