ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ.
ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಚುರ್ಚಿಗುಂಡಿಯಲ್ಲಿರುವ ಅಕ್ಕನ ಜೊತೆಗೆ ವಾಸವಾಗಿದ್ದ ಮಂಜುನಾಥ್ ಅವರು ಭದ್ರಾವತಿಯಲ್ಲಿ ಮತದಾನದ ಹಕ್ಕನ್ನ ಪಡೆದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಚುರ್ಚಿಗೊಂಡಯಿಂದ ಭದ್ರಾವತಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply