ಶಿವಮೊಗ್ಗ : ಇತ್ತೀಚಿಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲದಲ್ಲಿ ನಡೆದ ತ್ರಿಬಲ್ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಹಲವು ಜನರನ್ನ ಬಂಧಿಸಿ ಕೇಸ್ ದಾಖಲಿಸಿದ್ದರು, ಆದರೆ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಪೊಲೀಸರು ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನ ಕೆರೆಯ ಬಳಿ ಈ ಘಟನೆ ನಡೆದಿದೆ, ಬೀರನಕೆರೆ ಸಮೀಪ ಆರೋಪಿ ಶೋಹೆಬ್ ಅಲಿಯಾಸ್ ಅಂಡ ಇರುವ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗಿನ ಜಾವ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬಂಧನಕ್ಕೆ ತೆರಳಿದ್ದರೂ, ಈ ವೇಳೆ ಮಾರಕಾಸ್ತ್ರಗಳಿಂದ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ, ಮುನ್ನೆಚ್ಚರಿಕೆ ಕ್ರಮವಾಗಿ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿ ಶೋಹೆಬ್ ಅಲಿಯಾಸ್ ಅಂಡ ಎಂಬತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಇನ್ನು ಆರೋಪಿ ಶೋಹೆಬ್ ಅಲಿಯಾಸ್ ಅಂಡ ಆದಿಲ್ ಗ್ಯಾಂಗ್ ನಲ್ಲಿ ಇದ್ದ. ಇವನು ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಇವನ ಮೇಲೆ ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply