ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ  ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !

ಶಿವಮೊಗ್ಗ : ಸೀಟಿಗಾಗಿ ಮಹಿಳೆಯರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ‌ ಶುಕ್ರವಾರ ರಾತ್ರಿ ‌ನಡೆದಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ ಈ ನಡುವೆ ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ 

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ನಡೆದಿದ್ದೇನು ? 

ಶುಕ್ರವಾರ ರಾತ್ರಿ ಸಾಗರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ಸಿನಲ್ಲಿ ಇಬ್ಬರು ಮಹಿಳೆಯರು ಸೀಟಿಗಾಗಿ ಜಗಳ ಮಾಡಿಕೊಂಡಿದ್ದಾರೆ, ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿದೆ ಈ ನಡುವೆ ಬಸ್ಸಿನ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಜಗಳ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಕೊನೆಗೆ ಬಸ್ ಚಾಲಕ ಮಹಿಳೆಯರ ಗಲಾಟೆ ನಿಯಂತ್ರಿಸಲಾಗದೆ ಬಸ್ಸನ್ನು ಸಾಗರ ಪಟ್ಟಣ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.

ಗಲಾಟೆ ನಡೆಸಿದ ಮಹಿಳೆಯರನ್ನು ಬಸ್ಸಿನಿಂದ ಇಳಿಸಿ ಬಸ್ಸು ಶಿವಮೊಗ್ಗ ಕಡೆಗೆ ಪ್ರಯಾಣ ಬೆಳೆಸಿದೆ, ಇನ್ನು ಇಬ್ಬರು ಮಹಿಳೆಯರಿಗೆ ಪೊಲೀಸರು ಬುದ್ದಿವಾದ ಹೇಳಿ ಬಳಿಕ ಕಳುಹಿಸಿಕೊಟ್ಟಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.