ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!

ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಜೂನ್‌ 3ರಂದು ಮತದಾರರಿಗೆ ರಜೆ ನೀಡುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ಸಂಘ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.ಸಾಂದರ್ಭಿಕ ರಜೆ ನೀಡಲು ಆದೇಶ ಮಾಡಿದ್ದಾರೆ 

ವರದಿ : ಲಿಂಗರಾಜ್ ಗಾಡಿಕೊಪ್ಪ 

 


Leave a Reply

Your email address will not be published.