ಶಿವಮೊಗ್ಗ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ.
ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್ಗೆ ನುಗ್ಗಿದೆ.
ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ನಜ್ಜುಗಜ್ಜಾಗಿದ್ದ ಕಾರನ್ನು ತೆರವು ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply