ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೂ ಆರು ಸುತ್ತಿನ ಮತ ಎಣಿಕೆ ನಡೆದಿದ್ದು, ಆರು ಸುತ್ತಿನಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆಯನ್ನ ಸಾಧಿಸಿದ್ದಾರೆ.
ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಆರು ಸುತ್ತಿನ ಮತ ಎಣಿಕೆ ನಡೆದಿದ್ದು ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ, ಕೆಎಸ್ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಕಾರಣ, ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು , 6,000 ಮತಗಳನ್ನು ಕೆಎಸ್ ಈಶ್ವರಪ್ಪ 6ನೇ ಸುತ್ತಿನ ಮತ ಎಣಿಕೆಯಲ್ಲಿ ಪಡೆದಿದ್ದಾರೆ
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ 6ನೇ ಸುತ್ತಿನ ಮತ ಎಣಿಕೆಯಲ್ಲಿ 1,73, 745 ಮತಗಳನ್ನು ಪಡೆದಿದ್ದರೆ,
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 1,24,250 ಪಡೆದಿದ್ದಾರೆ,
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ : 6,172
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ 49,495 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
ಲಕ್ಷ ಗಡಿದಾಟಿದ ಬಿ ವೈ ರಾಘವೇಂದ್ರ ! ನಾಲ್ಕನೇ ಸುತ್ತಿನಲ್ಲೂ ಬಿವೈ ಆರ್ ಮುನ್ನಡೆ !
Leave a Reply