ಶಿವಮೊಗ್ಗ : ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ, ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಧಿಕಾರಿಗಳು ಆಗಮಿಸಿ ಮತ ಎಣಿಕೆ ಕಾರ್ಯ ಶುರು ಮಾಡಿದ್ದಾರೆ
ಇನ್ನು ಸಹ್ಯಾದ್ರಿ ಕಾಲೇಜ್ ಹೊರಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಮಾಡಿದ್ದು ಗುರುತಿನ ಚೀಟಿ ಇರುವ ಅಧಿಕಾರಿಗಳು, ಸಿಬ್ಬಂದಿ, ರಾಜಕೀಯ ಪಕ್ಷಗಳ ಎಣಿಕೆ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹೊರತು ಮತ್ಯಾರಿಗು ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಸಹ್ಯಾದ್ರಿ ಕಾಲೇಜು ಗೇಟ್ ಮುಂಭಾಗ ಪೊಲೀಸ್ ಸಿಬ್ಬಂದಿ ಗುರುತು ಚೀಟಿ ಹೊಂದಿರುವವರನ್ನು ಪರಿಶೀಲಿಸಿ ಕೇಂದ್ರದೊಳಗೆ ಬಿಡಲಾಗುತ್ತಿದೆ
ಇನ್ನು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಕಾಲೇಜಿನ ಹೊರಬಾಗದಲ್ಲಿ ನಿಂತು ಫಲಿತಾಂಶವನ್ನು ಆಲಿಸಬಹುದಾಗಿದೆ, ಇದಕ್ಕಾಗಿ ಕಾಲೇಜು ಹೊರಬಾಗದಲ್ಲಿ ಮೈಕ್ ವ್ಯವಸ್ಥೆಯನ್ನು ಮಾಡಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply