ಶಿವಮೊಗ್ಗ : ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ಇದೀಗ ಅಂತಿಮ ಅಂತ ತಲುಪಿದ್ದು ಹಲವು ಸುತ್ತಿನ ಎಣಿಕೆಯ ನಂತರ ಈಗ ಅಂತಿಮ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆದ್ದು ಬೀಗಿದ್ದಾರೆ
ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿತ್ತು. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ. ರಾಘವೇಂದ್ರ ಅವರ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಅದರಲ್ಲೂ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ರೈಲು ಸಂಪರ್ಕ ಸೇರಿ ಹಲವು ರೀತಿಯ ಅಭಿವೃದ್ಧಿಗೆ ಕಾರಣರಾಗಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಇಲ್ಲಿ ಕೆಲಸ ಮಾಡುವ ಸಾಧ್ಯತೆ ಇತ್ತು. ಹಾಗಾಗಿ, ರಾಘವೇಂದ್ರ ಅವರು ಗೆಲುವಿನ ವಿಶ್ವಾಸದಲ್ಲಿದ್ದರು. ಅದರಂತೆ ಅವರು ಮುನ್ನಡೆ ಸಾಧಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿತ್ತು. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಗೆಲುವು ಯಾರಿಗೆ ಎಂಬು ಕುತೂಹಲ ಮಲೆನಾಡಿಗರ ಮನದಲ್ಲಿ ಮನೆ ಮಾಡಿತ್ತು. ಈ ಬಾರಿಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ, ಪುತ್ರನಿಗೆ ಟಿಕೆಟ್ ತಪ್ಪಿದ ಕಾರಣಕ್ಕಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಬಂಡಾಯ ಎದ್ದು ಕಣಕ್ಕಿಳಿದು ಶಿವಮೊಗ್ಗ ಚುನಾವಣಾ ಕಣವನ್ನು ರಂಗೆರಿಸಿದ್ದರು ಈಗಾಗಲೇ ಹಲವು ಸುತ್ತುಗಳ ಮತ ಎಣಿಕೆ ನಡೆದಿದ್ದು ಬೆಳಿಗ್ಗೆಯಿಂದ ನಡೆದ ಎಲ್ಲಾ ಸುತ್ತಿನ ಮತ ಎಣಿಕೆಯಲ್ಲಿ ಕೂಡ ಬಿವೈ ರಾಘವೇಂದ್ರ ಮುನ್ನಡೆಯಲ್ಲಿದ್ದಾರೆ ಶಿವಮೊಗ್ಗ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿ ವೈ ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ , ಇನ್ನು ಪಕ್ಷೇತರವಾಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸೋಲನ್ನ ಅನುಭವಿಸಿದ್ದಾರೆ
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಓದಿ : ಲೋಕಸಭಾ ಮೆಗಾ ರಿಸಲ್ಟ್ : ಬಿ ವೈ ರಾಘವೇಂದ್ರ ಆರಂಭಿಕ ಮುನ್ನಡೆ ! ಕೆ ಎಸ್ ಈಶ್ವರಪ್ಪ ಭಾರಿ ಹಿನ್ನಡೆ !
ಓದಿ : BREAKING NEWS : ಮತ ಎಣಿಕೆ ಆರಂಭ ! ಅಂಚೆ ಮತ ಎಣಿಕೆ ! ಬಿ ವೈ ರಾಘವೇಂದ್ರ ಮುನ್ನಡೆ !
Leave a Reply