ಶಿವಮೊಗ್ಗ : ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಮತಗಳ ಎಣಿಕೆ ಕಾರ್ಯ ಆರಂಭ ವಾಗಿದ್ದು
ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡರು ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ
ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್ ಎಲ್ ಭೋಜೇಗೌಡ ಅವರು ಮೊದಲ ಸುತ್ತಿನ ಎಣಿಕೆಯಲ್ಲಿ 3112 ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ
ಇನ್ನು ನೈರುತ್ಯ ಪದವಿಧರ ಕ್ಷೇತ್ರದ ಮತ ಏಣಿಕೆ ಕಾರ್ಯ ಮಧ್ಯಾಹ್ನ 3 ಗಂಟೆಯ ಮೇಲೆ ಶುರುವಾಗಲಿದೆ ಎಂದು ಹೇಳಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ



Leave a Reply