ಆನಂದಪುರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಸಮೀಪದ ಮುಂಬಾಳು ತಿರುವಿನಲ್ಲಿ ಖಾಸಗಿ ಬಸ್ ಒಂದು ಪಲ್ಟಿಯಾಗಿ 15ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ
ಸಾಗರದಿಂದ ಬೆಳ್ತಂಗಡಿಗೆ ಹೋಗುವ K A 20 C 6997 ನೋಂದಣಿಯ ಖಾಸಗಿ ಬಸ್ ಆನಂದಪುರ ಸಮೀಪದ ಮುಂಭಾಳು ತಿರುವಿನಲ್ಲಿ ಪಲ್ಟಿಯಾಗಿದೆ, ಬೆಳ್ಳಂ ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅತಿಯಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ
ಇನ್ನು ಗಾಯಗೊಂಡಿರುವ 15ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗರ ಆನಂದಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಇದನ್ನೂ ಓದಿ : ವಸತಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ
Leave a Reply