ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಖಾಸಗಿ ಲಾರಿ ಹಾಗೂ ಕೆಎಸ್ಆರ್’ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್’ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಎಸ್ಆರ್’ಟಿ ಸಿ ಬಸ್ಲಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply