BIG BREAKING NEWS : ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ  ಭಾನುಪ್ರಕಾಶ್ ಗೆ ಹೃದಯಘಾತದಿಂದ ನಿಧನ !

ಶಿವಮೊಗ್ಗ : ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ನಿಧನರಾಗಿದ್ದಾರೆ. 

ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್‌ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಮನೆಗೆ ಹೊರಟಿದ್ದ ಭಾನುಪ್ರಕಾಶ್‌ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

 ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.