ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ ! ಕುದುರೆ ಏರಿ ಬಂದ ಡಿ ಎಸ್ ಅರುಣ್ !

ಶಿವಮೊಗ್ಗ : ಪೆಟ್ರೋಲ್, ಡೀಸೆಲ್ ಬೆಲೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಇಂದು ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಇಂದು ಶಿವಮೊಗ್ಗ ಬಿಜೆಪಿಯಿಂದ ನಗರದ ಐದು ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದರು, ಜೈಲ್ ರಸ್ತೆಯಲ್ಲಿ ಯುವಮೋರ್ಚಾದ ಕಾರ್ಯಕರ್ತರು ಸಿಎಂ ಸುಳ್ಳ ಡಿಸಿಎಂ ಕಳ್ಳ, ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂಬ ಘೋಷಣೆ ಕೂಗುತ್ತಾ ಮಾರುತಿ 800 ಕಾರಿನ ಮೇಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯ ಅಣಕು ವೇಷ ಹಾಕಿಕೊಂಡು ಕಾರನ್ನ ತಳ್ಳಿಕೊಂಡು ಪ್ರತಿಭಟನೆ ನಡೆಸಿದರು 

ಮಹಿಳಾ ಮೋರ್ಚಾದಿಂದ ಗೋಪಿ ವೃತ್ತದಲ್ಲಿ ತರಕಾರಿ ಚೀಲಗಳನ್ನ ತಂದು ಟೆಮೋಟೋ‌ ಕೆಜಿಗೆ 80ರೂ. ಕಡಲೆಕಾಳು ಕೆಜಿಗೆ 80 ರೂ, ಮೂಲಂಗಿ ಕೆಜಿಗೆ 100 ಎಂದು ತರಕಾರಿ ಮೂಟೆ ಮೇಲೆ ಮೊದಲಾದ ದರಗಳ ಪಟ್ಟಿ ಹಾಕಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು 

ಬರಪರಿಹಾರ ನೀಡಿಲ್ಲ ಎಂದು ರೈತ ಮೋರ್ಚದ ಕಾರ್ಯಕರ್ತರು ಮಥುರಾ ಪ್ಯಾರಡೈಸ್ ನಿಂದ ಎತ್ತಿನ ಗಾಡಿ ಮತ್ತು ಟ್ರ್ಯಾಕ್ಟರ್ ಮೂಲಕ ಬಂದರೆ, ಒಬಿಸಿ ಮೋರ್ಚಾದ ಕಾರ್ಯಕರ್ತರು ಕಸ್ತೂರ ಬಾ ಕಾಲೇಜಿನ ರಸ್ತೆಯಿಂದ ಬೈಕ್ ಗೆ ಹಗ್ಗ ಕಟ್ಟಿಕೊಂಡು ಎಳೆದುಕೊಂಡು ಬರಲಾಯಿತು. ಶಾಸಕ ಡಿ.ಎಸ್ ಅರುಣ್ ಕುದುರೆ ಏರಿ ಬಂದರೆ, ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ ಶವಸಂಸ್ಕಾರಕ್ಕೆ ಬಳಸುವ ಮಡಿಕೆಯಲ್ಲಿ ಅಗ್ನಿ ಕುಂಡವನ್ನ ಹಿಡಿದು, ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್, ಶಾಸಕ ಚನ್ನಬಸಪ್ಪ ಚಟ್ಟದಲ್ಲಿ ಬೈಕ್ ಕಟ್ಟಿಕೊಂಡು ಗೋಪಿವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.