ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ ಹಿಂಭಾಗ ಮೊಟಾಳು ಚೌಡಮ್ಮ ದೇವಸ್ಥಾನದ ಸಮೀಪ ಮತ್ತೂರಿನ ರಸ್ತೆಯಲ್ಲಿ ನಾಲ್ಕು ಜನ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ನೆನ್ನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ ಜಿ, ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆಯ ಪಿ ಐ ಸಿದ್ದೇಗೌಡ ಎಚ್ ಎಂ ಮತ್ತು ಸಿ ಎ ಎನ್ ಠಾಣೆಯ ಪಿಎಸ್ ಐ ಬಸವರಾಜ ಬಿರಾದಾರ ನೇತೃತ್ವದ ಸಿಬ್ಬಂಧಿಗಳ ತಂಡ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೂ ಆರೋಪಿಗಳಿಂದ 1.35 ಲಕ್ಷ ರೂ. ಮೌಲ್ಯದ 1 ಕೆಜಿ 65 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಭದ್ರಾವತಿಯ ತಡಸ ಗ್ರಾಮದ ಸೈಯದ್ ಸಲೇಹ (28) ಅನ್ವರ್ ಕಾಲೋನಿಯ ಮಹಮದ್ ಮುಸ್ತಪ (25), ನೆಹರು ನಗರದ ಮುಬಾರಕ್ ಅಲಿಯಾಸ್ ಡಿಚ್ಚಿ (27) ಮತ್ತು ಜಟ್‌ಪಟ್ ನಗರದ ನ್ಯಾಮತ್ ಖಾನ್ (27) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply