ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !

ಹಾವೇರಿ : ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ 

ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿರುವ ಪೋಲೀಸರು. 

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿಯಲ್ಲಿ ಒಟ್ಟು 17 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 4 ಮಂದಿ ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.