ಶಿವಮೊಗ್ಗ : ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಅಂಬುಲೆನ್ಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.
ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು.
ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ.
ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply