ಭದ್ರಾವತಿ : ಇಂದು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು ಕಾರ್ಖಾನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ವಿಐಎಸ್ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ ಅವರು, ಕಾರ್ಖಾನೆಯ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ನಾಯಕ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ, ಸೈಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಸೇರಿದಂತೆ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply