ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ! ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ ! ಹೊಸ ಸಿಇಓ ಯಾರು ?

ಶಿವಮೊಗ್ಗ : ಆಡಳಿತ ವರ್ಗಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದೂ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ತಕ್ಷಣವೇ ನೂತನ ಜಾಗಗಳಿಗೆ ರೀಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೆಶ್ ಕುಮಾರ್ ಎಸ್ ನಿರ್ದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ( ಸಿಇಓ ) ಕಾರ್ಯ ನಿರ್ವಹಿಸುತ್ತಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಮತ್ತು ಇವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್‌ ಕಾರ್ಖಾನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.  

ಹೊಸ ಸಿಇಓ ಯಾರು ?

ಬಳ್ಳಾರಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್‌ ಅಧಿಕಾರಿ ಹೇಮಂತ್‌ .ಎನ್‌ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾಯಿಸಲಾಗಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.