ಎಮ್ಮೆಹಟ್ಟಿ ಗ್ರಾಮಕ್ಕೆ ಗೀತಾ-ಶಿವರಾಜಕುಮಾರ್ ದಂಪತಿ ಭೇಟಿ ! ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ಪರಿಹಾರ !

ಶಿವಮೊಗ್ಗ : ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾಡಗಿಯಲ್ಲಿ ಮುಂಜಾನೆ 13 ಮಂದಿಯನ್ನು ಟಿಟಿ ವಾಹನ ಬಲಿ ತೆಗೆದುಕೊಂಡಿತ್ತು. ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿತ್ತು. ವಾಹನದ ಪೂಜೆಗಾಗಿ ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿತ್ತು.

.ಹಾವೇರಿ ಬಳಿ ಭೀಕರ ಅಪಘಾತದಲ್ಲಿ 13 ಜನ ಸಾವನ್ನಪ್ಪಿದವರ ಗ್ರಾಮವಾದ ಎಮ್ಮೆಹಟ್ಟಿ ಗ್ರಾಮಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದರು. ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ಹಣ ನೀಡಿದರು.

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಿವಣ್ಣ ದಂಪತಿ, ಒಟ್ಟು 13 ಲಕ್ಷ ಹಣ ನೀಡಿದರು.

ಗಾಯಾಳು ಅರ್ಪಿತಾಳನ್ನು ಮಾತಾನಾಡಿಸಿದ ಶಿವಣ್ಣ ಧೈರ್ಯ ತುಂಬಿದರು. ಶಿವಣ್ಣ ದಂಪತಿಗೆ ಭದ್ರಾವತಿ ಶಾಸಕ ಸಂಗಮೇಶ್ ಸಾಥ್ ನೀಡಿದರು.

ಬಳಿಕ ಮಾತನಾಡಿದ ಅವರು, ದುರ್ಘಟನೆ ನೋಡಿ ಬರುವ ಧೈರ್ಯ ಮಾಡುವ ಕಷ್ಟವಾಯ್ತು. ಒಂದು ನಿಮಿಷದಲ್ಲಿ 13 ಜನ ಸಾವನಪ್ಪಿದ್ದಾರೆ. ಸಾವಿನ ದುಃಖ ತಡೆದುಕೊಳ್ಳಲು ದೇವರು ಅವರಿಗೆ ಶಕ್ತಿ ತುಂಬಲಿ. ಮಾನಸ ಕಳೆದುಕೊಂಡಿದ್ದು ತುಂಬಾ ದೊಡ್ಟ ನಷ್ಟವಾಗಿದೆ. ಊರಿನ ಗ್ರಾಮಸ್ಥರು ಆ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಕುಟುಂಬಸ್ಥರ ನೆರವಿಗೆ ಬರಲು ಇಲ್ಲಿಗೆ ಬಂದಿದ್ದೇವೆ. ನಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಿದ್ದೇವೆ. ಇದು ಮಾತಾನಾಡುವ ಸಮಯವಲ್ಲ. ಕುಟುಂಬಸ್ಥರಿಗೆ ಸಮಾಧಾನ ಮಾಡುವುದು ಕಷ್ಟ. ಊರಿನ ಗ್ರಾಮಸ್ಥರು ಆ ಕುಟುಂಬದ ಜೊತೆ ನಿಂತಿದ್ದಾರೆ. ಇಲ್ಲಿಗೆ ಬಂದಾಗ ತುಂಬಾ ಬೇಜಾರಾಯ್ತು. ತುಂಬಾ ದುಃಖವಾಯ್ತು. ವಿಶೇಷ ಚೇತನ ಅರ್ಪಿತಾಗೆ ದೇವರು ಶಕ್ತಿ ಕೊಡಲಿ. ನಾವು ಕುಟುಂಬದ ಜೊತೆ ಇರುತ್ತೇವೆ ಎಂದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.