ಶಿವಮೊಗ್ಗ : ನಗರದ ವಿವಿಧಡೆ ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳಲ್ಲಿ ವಿವಿಧ ಕಚೇರಿಗಳಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.
ಇದಕ್ಕೆ ಸಂಬಂಧಿಸಿದ ಕೆಲ ಫೋಟೋ ಮತ್ತು ವಿವರಣೆಗಳು ಇಲ್ಲಿದೆ !
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು 78ನೆಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹೊಳೆ ಹೊನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿದ್ದರು.
78 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯ ಆವರಣದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಎನ್ ಚನ್ನಬಸಪ್ಪ ಅವರು, ಪಾಲಿಕೆ ಆಯುಕ್ತರಾದ ಶ್ರೀಮತಿ ಕವಿತಾ ಯೋಗಪ್ಪನವರ್ ಅವರು ಧ್ವಜಾರೋಹಣ ಮಾಡಿದ ಸಂದರ್ಭ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ.
ಮಾಜಿ ಸಚಿವರಾದ ಕೆಎಸ್ ಈಶ್ವರಪ್ಪನವರು ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಸವಳಂಗ ರಸ್ತೆಯಲ್ಲಿರುವ ಮೆಟ್ರೋ ಆಸ್ಪತ್ರೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಕೆಇ ಕಾಂತೇಶ್ ಆಸ್ಪತ್ರೆಯ ಸಿಬ್ಬಂದಿಗಳು ಆಡಳಿತ ವರ್ಗದವರು ಉಪಸ್ಥಿತರಿದ್ದರು
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿಡಿ ಮೇಘರಾಜ್ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ ಧ್ವಜಾರೋಹಣ ನೆರವೇರಿಸಿದ ಸಂದರ್ಭ
78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ಸೂಡ ಅಧ್ಯಕ್ಷರಾದ ಶ್ರೀ ಎಚ್ಎಸ್ ಸುಂದರೇಶ್ ಅವರು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು.
Leave a Reply