ನವದೆಹಲಿ : ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರಕಾರಗಳಿಗಿವೆ ಎಂಬ ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಬುಧವಾರ ನಡೆಯಲಿದೆ.
ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿರುವ ಕಾರಣ ಭದ್ರತೆ ಹೆಚ್ಚಿಸಲಾಗಿದೆ.ಉದ್ಯಮ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ.
ಹಲವು ರಾಜ್ಯಗಳ ಹಲವಾರು ಎಸ್‌ಸಿ/ಎಸ್‌ಟಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಭಾರತ್ ಬಂದ್‌ಗೆ ಕರೆ ನೀಡಿದ್ದರೂ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲೆಗಳು, ಕಾಲೇಜುಗಳು, ಪೆಟ್ರೋಲ್ ಪಂಪ್‌ಗಳು ಕಾರ್ಯನಿರ್ವಹಿಸಲಿವೆ ಎಂದು ವರದಿಗಳು ಸೂಚಿಸುತ್ತವೆ. ಇದಲ್ಲದೆ, ತುರ್ತು ಸೇವೆಗಳಾದ ವೈದ್ಯಕೀಯ, ಕುಡಿಯುವ ನೀರು, ಸಾರ್ವಜನಿಕ ಸಾರಿಗೆ, ರೈಲು ಸೇವೆಗಳು ಮತ್ತು ವಿದ್ಯುತ್ ಸೇವೆಗಳು ತೆರೆದಿರುತ್ತವೆ. ಮೆಡಿಕಲ್, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್‌ಗಳು, ಶಾಲಾ ಕಾಲೇಜು, ಎಲ್ಲಾ ಬ್ಯಾಂಕ್‌ಗಳು, ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.
ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್ ಕಾವು ಇರಲಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಈ ಭಾರತ್ ಬಂದ್‌ನ ಮುಖ್ಯ ಉದ್ದೇಶವೆಂದರೆ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು. ಈ ಬಂದ್‌ಗೆ ವಿವಿಧ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳ ಬೆಂಬಲ ಸಿಗುವ ನಿರೀಕ್ಷೆಯಿದೆ. ನ್ಯಾಯಾಲಯದ ಅನ್ಯಾಯದ ತೀರ್ಪನ್ನು ಎತ್ತಿ ಹಿಡಿಯುವುದು ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಹೇಳಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply