ಶಿವಮೊಗ್ಗ : ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿರುವ ಘಟನೆ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ನ ರಾಜಾತೀಥ್ಯ ದ ಫೋಟೋ ವೈರಲ್ ಆದ ಬೆನ್ನಲ್ಲೇ, ಒಂಬತ್ತು ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದರು, ಈ ಸಂಬಂಧ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ಡಿ ಗ್ಯಾಂಗ್ ನ ಸಹಚರರನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ, ಡಿ ಗ್ಯಾಂಗ್ ನ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೇ ಎನ್ನುವ ಮಾಹಿತಿ ಕೇಳಿ ಬರುತ್ತಿತ್ತು. ಸ್ಥಳಾಂತರಿಸುವ ಮುನ್ನವೇ ದಾಳಿ ನಡೆದಿದ್ದು ಮಹತ್ವ ಪಡೆದುಕೊಂಡಿದೆ.
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್ ನೇತೃತ್ವದಲ್ಲಿ 120ಕ್ಕೂ ಹೆಚ್ಚು ಪೊಲೀಸರ ತಂಡ ದಾಳಿ ನಡೆಸಿದ್ದು.ಜೈಲಿನ ಪ್ರತಿ ಬ್ಯಾರಕ್‌ಗಳನ್ನ ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಿಷೇಧಿತ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಎಂಬ ಮಾಹಿತಿ ಲಭಿಸಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply