ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಸುವಿನ ಕೆಚ್ಚಲು ಕೊಯ್ದಿದ್ದ ಆರೋಪಿ ರಾಮಚಂದ್ರನನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ.
ಜಾಹಿರಾತು:
ಏನಿದು ಪ್ರಕರಣ?
ನವೀನ್ ಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳನ್ನು ಜೂನ್ 28ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. ಈ ವೇಳೆ, ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಘಟನೆ ರೈತರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಜೂನ್ 29ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ಬಂಧನ ಮತ್ತು ಕಾರಣ:
ಪೊಲೀಸರ ತನಿಖೆಯಿಂದ ವಿಜಾಪುರ ಗ್ರಾಮದ ನಿವಾಸಿ ರಾಮಚಂದ್ರ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆರೋಪಿ ರಾಮಚಂದ್ರ ತನ್ನ ತೋಟಕ್ಕೆ ಹಸುಗಳು ನುಗ್ಗುತ್ತಿದ್ದರಿಂದ ಆಕ್ರೋಶಗೊಂಡು ಕತ್ತಿ ಮತ್ತು ದೊಣ್ಣೆಯಿಂದ ಹಸುವಿನ ಕೆಚ್ಚಲಿಗೆ ಗಾಯಗೊಳಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿ ರಾಮಚಂದ್ರ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (Prevention of Cruelty to Animals Act – 1960) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯಗಳೇನು? ಕಾಮೆಂಟ್ ಮಾಡಿ ತಿಳಿಸಿ.
ಇದನ್ನು ಓದಿ : ಆನಂದಪುರ: ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ! ಏನಿದು ಪ್ರಕರಣ? ಪೂರ್ತಿ ಓದಲು ಕೆಳಗಿರುವ ಕ್ಲಿಕ್ ಮಾಡಿ
WhatsApp Number : 7795829207
Leave a Reply