ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗದ ಕಾನೂನು ಪದವೀಧರರು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಭತ್ಯೆಯನ್ನೂ ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು:
- ಪ್ರವರ್ಗ-1: ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮಿತಿಯೊಳಗಿರಬೇಕು ಹಾಗೂ ವಯಸ್ಸು 40 ವರ್ಷದೊಳಗಿರಬೇಕು.
- ಪ್ರವರ್ಗ-2ಎ, 3ಎ, ಮತ್ತು 3ಬಿ: ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮಿತಿಯೊಳಗಿರಬೇಕು ಹಾಗೂ ವಯಸ್ಸು 38 ವರ್ಷದೊಳಗಿರಬೇಕು.
ಕಾರ್ಯಕ್ರಮದ ವಿವರಗಳು:
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 4,000 ರೂ. ಭತ್ಯೆಯನ್ನು 4 ವರ್ಷಗಳವರೆಗೆ ನೀಡಲಾಗುವುದು.
- ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅರ್ಹ ಮತ್ತು ಆಸಕ್ತಿಯುಳ್ಳ ಪದವೀಧರರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2025.
- ಅರ್ಜಿ ಸಲ್ಲಿಸಲು ವೆಬ್‌ಸೈಟ್: [www.bcwd.kar.nic.in]
ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಆಸಕ್ತ ಮತ್ತು ಅರ್ಹ ಕಾನೂನು ಪದವೀಧರರಿಗೆ ಮನವಿ.
ಶಿವಮೊಗ್ಗ: ಹೃದಯಾಘಾತದಿಂದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತಿದ್ದ ವಿದ್ಯಾರ್ಥಿ ಸಾವು – ಗ್ರಾಮದಲ್ಲಿ ಶೋಕ ಮಡುಗಿದೆ! ಪೂರ್ತಿ ಓದಲು ಕೆಳಗಿರುವ ಕ್ಲಿಕ್ ಮಾಡಿ
ಜಾಹಿರಾತು:
WhatsApp Number : 7795829207
Leave a Reply