ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಈ ನಡುವೆ, ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಶುಕ್ರವಾರ ಮಹತ್ವದ ಘೋಷಣೆಯನ್ನು ಮಾಡಿದೆ.
ಪಕ್ಷದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಟ ವಿಜಯ್ ಅವರನ್ನು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ಮುಖಂಡರು ಒಮ್ಮತದಿಂದ ತೆಗೆದುಕೊಂಡಿದ್ದಾರೆ.
ಘೋಷಣೆಯ ನಂತರ ಮಾತನಾಡಿದ ವಿಜಯ್, ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಪಡಿಸುವುದು ತಮ್ಮ ಪ್ರಮುಖ ಜವಾಬ್ದಾರಿ ಎಂದು ತಿಳಿಸಿದ್ದಾರೆ. ಇದಕ್ಕಾಗಿ, ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ವಿಜಯ್ ಅವರು 2024ರಲ್ಲಿ ಔಪಚಾರಿಕವಾಗಿ TVK ಪಕ್ಷವನ್ನು ಪ್ರಾರಂಭಿಸಿದ್ದರು. ಅಂದು ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆದರೆ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಅದರಂತೆ, ಇಂದು ನಡೆದ ಸಭೆಯಲ್ಲಿ ಅವರನ್ನೇ ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಇದನ್ನು ಓದಿ : ಶಿವಮೊಗ್ಗ : ಐ ಆಮ್ ಸಾರಿ ಅಪ್ಪ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಮದುವೆಯಾದ ಮೊದಲ ವರ್ಷದಲ್ಲೇ ಯುವಕ ಆತ್ಮಹತ್ಯೆ!! – ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಜಾಹಿರಾತು:
ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ!
TVK ಪಕ್ಷವು ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು 2026ರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗಳಿಗೆ ಇದೀಗ ಅಧಿಕೃತ ತೆರೆ ಬಿದ್ದಿದೆ.
ಈ ಘೋಷಣೆಯು ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, 2026ರ ಚುನಾವಣೆ ಮತ್ತಷ್ಟು ಕುತೂಹಲಕಾರಿಯಾಗುವ ನಿರೀಕ್ಷೆಯಿದೆ.
ಜಾಹಿರಾತು:
WhatsApp Number : 7795829207
Leave a Reply