ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು.
ಈ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವವರು ಜುಲೈ 15, 2025 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿ ಪಡೆಯಲು, ಆಸಕ್ತರು [https://www.karnatakaone.gov.in/Public/GramOneFranchiseeTrems] ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಈ ಗ್ರಾಮ ಒನ್ ಕೇಂದ್ರಗಳು ಸಹಕಾರಿಯಾಗಲಿವೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಇದನ್ನು ಓದಿ : ಶಿವಮೊಗ್ಗ : ಐ ಆಮ್ ಸಾರಿ ಅಪ್ಪ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಮದುವೆಯಾದ ಮೊದಲ ವರ್ಷದಲ್ಲೇ ಯುವಕ ಆತ್ಮಹತ್ಯೆ!! – ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಜಾಹಿರಾತು:
WhatsApp Number : 7795829207
Leave a Reply